ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ತಾಲೂಕಿನ ಮಲ್ಲಾಪುರ ಸಮೀಪದ ಕುರ್ನಿಪೇಟೆಯಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಪತ್ತೆಯಾಗಿ, ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಸೆರೆಹಿಡಿದ ಘಟನೆ ಭಾನುವಾರ ಸಂಜೆ ನಡೆದಿದೆ.

ಕುರ್ನಿಪೇಟೆಯ ಎಲ್‌&ಟಿ ಕಂಪೌಂಡ್‌ ಬಳಿ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಸಾರ್ವಜನಿಕ ಜಾಗದಲ್ಲಿ ಸರ್ಪ ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದರು. ಕಂಪೌಂಡ್‌ ಮೇಲೆ ಕುಳಿತಿದ್ದ ಕಾಳಿಂಗ ಸರ್ಪವನ್ನು ಗಮನಿಸಿದ ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು.

ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಬಿಲಾಲ್ ಶೇಖ್ ಹಾಗೂ ರಾಯಪ್ಪ ಅವರು ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದರು.

ಕಾಳಿಂಗ ಸರ್ಪವನ್ನು ಹಿಡಿಯುವ ಕಾರ್ಯಾಚರಣೆಯನ್ನು ವೀಕ್ಷಿಸಲು ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಬಳಿಕ ಸರ್ಪವನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.

 

 

Please Share: