ಕರಾವಳಿ ವಾಯ್ಸ್ ನ್ಯೂಸ್ 

ಸಿದ್ದಾಪುರ: ತಾಲೂಕಿನ ಕಾನಸೂರುದಲ್ಲಿರುವ ಇಂದಿರಾಗಾಂಧಿ ವಸತಿ ನಿಲಯದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಮಂಗಳವಾರ ನಡೆದಿದೆ.

Banner Ad

ತಾಲೂಕಿನ ಹುತ್ತಗಾರ ಹಾರ್ಸಿಕಟ್ಟಾ ಗ್ರಾಮದ ನಿವಾಸಿಯಾದ ಗೋಕುಲ ಕೃಷ್ಣಾ ಗೌಡಾ (16) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಗೋಕುಲ ಕಾನಸೂರಿನ ವಸತಿ ನಿಲಯದಲ್ಲಿ ವಾಸವಿದ್ದು, ಸ್ಥಳೀಯ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು ಎನ್ನಲಾಗಿದೆ.

ಮಂಗಳವಾರ ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿದರು.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ವಿದ್ಯಾರ್ಥಿಯ ಕುಟುಂಬಸ್ಥರು ಹಾಗೂ ವಸತಿ ನಿಲಯದ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

 

Please Share: