ಕರಾವಳಿ ವಾಯ್ಸ್ ನ್ಯೂಸ್
ಅಂಕೋಲಾ: ತಾಲೂಕಿನ ಹಾರವಾಡ ಗ್ರಾಮದಲ್ಲಿ ಭಂಡಾರಿ ಸಮಾಜದ ವತಿಯಿಂದ 11ನೇ ವರ್ಷದ ಸಾರ್ವಜನಿಕ ಮಹಾಗಣಪತಿ ಉತ್ಸವವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನೂ ಆಯೋಜಿಸಲಾಗಿದ್ದು, ಗ್ರಾಮದ ಭಕ್ತರು ಹಾಗೂ ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗಣಪತಿ ದರ್ಶನ ಪಡೆದು ಉತ್ಸವದ ಸಂಭ್ರಮದಲ್ಲಿ ಭಾಗಿಯಾದರು.
ಕಾರ್ಯಕ್ರಮದಲ್ಲಿ ಭಂಡಾರಿ ಸಮಾಜದ ಗೌರವಾಧ್ಯಕ್ಷ ದಿನೇಶ್ ಭಂಡಾರಿ, ಅಧ್ಯಕ್ಷ ಸಾಯಿಕಿರಣ್ ನಾಗೇಶ್ ಬಾಬ್ರೆಕರ್, ಕಾರ್ಯದರ್ಶಿ ಸೋಮನಾಥ್ ನಾಯ್ಕ, ಖಜಾಂಚಿ ರಾಜೇಶ್, ನಾಗರಾಜ್ ನಾಯ್ಕ, ನಂದಾ ಸೇರಿದಂತೆ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
ಸಮಾಜದ ಸದಸ್ಯರು ಒಗ್ಗಟ್ಟಿನಿಂದ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಭಕ್ತಿ, ಸೌಹಾರ್ದತೆ ಹಾಗೂ ಸಾಮಾಜಿಕ ಒಗ್ಗಟ್ಟಿನ ಸಂದೇಶ ಸಾರಿದರು.



