ಕರಾವಳಿ ವಾಯ್ಸ್ ನ್ಯೂಸ್

ಕಾರವಾರ: ಅಂಕೋಲಾದಿಂದ ಕಾರವಾರದ ಕಡೆಗೆ ಬರುತ್ತಿದ್ದ ಪ್ರಯಾಣಿಕರ ಟೆಂಪೋ ಒಂದು, ಮುಂದೆ ಸಾಗುತ್ತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ಮುದಗಾ ಬಳಿ ನಡೆದಿದೆ.

ಪೊಲೀಸರ ಪ್ರಕಾರ, ಮುದಗಾ ಬಳಿ ಇರುವ ಹಂಪ್ ಕಾರಣ ಟಿಪ್ಪರ್ ಚಾಲಕ ವೇಗ ಕಡಿಮೆ ಮಾಡಿದಾಗ, ಹಿಂಬದಿಯಿಂದ ಬರುತ್ತಿದ್ದ ಟೆಂಪೋ ಚಾಲಕ ಕೂಡಾ ಬ್ರೇಕ್ ಹಾಕಿದ್ದಾನೆ. ಆದರೆ ಟೆಂಪೋ ಬ್ರೇಕ್ ಸರಿಯಾಗಿ ಕಾರ್ಯನಿರ್ವಹಿಸದೇ ನಿಯಂತ್ರಣ ತಪ್ಪಿ ಟಿಪ್ಪರ್‌ಗೆ ಗುದ್ದಿದೆ. ಪರಿಣಾಮ ಟೆಂಪೋದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಎಲ್ಲರೂ ಬಿದ್ದಿದ್ದೇ ಅಪಘಾತಕ್ಕೆ ತೀವ್ರತೆ ಹೆಚ್ಚಿಸಿದೆ.

ಘಟನೆಯಲ್ಲಿ ಸುಮಾರು 12 ಪ್ರಯಾಣಿಕರು ಗಾಯಗೊಂಡಿದ್ದು, ರೇಷ್ಮಾ ಎಂಬ ಮಹಿಳೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

 

Please Share: