ಕರಾವಳಿ ವಾಯ್ಸ್ ನ್ಯೂಸ್

ಮುಂಡಗೋಡ: ಪಟ್ಟಣದಲ್ಲಿ ಚರಸ್‌ ವಹಿವಾಟು ನಡೆಸುತ್ತಿದ್ದ ಇಂಜಿನಿಯರ್ ಒಬ್ಬನನ್ನು ಸ್ಥಳೀಯ ಪೊಲೀಸರು ಭರ್ಜರಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

Banner Ad

ಸುಭಾಷ್ ನಗರದ ನಿವಾಸಿ ಸಚಿನ್ ಟೇಕಬಹುದ್ದೂರ್ ಗೋರ್ಖಾ (26) ಬಂಧಿತ ಆರೋಪಿ.

ಮುಂಡಗೋಡು ಬಸ್ ಡಿಪೋ ಹತ್ತಿರ ಬೈಕ್ ಮೇಲೆ ಚರಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 781 ಗ್ರಾಂ ಚರಸ್ ವಶಪಡಿಸಿಕೊಂಡಿದ್ದಾರೆ. ವಶವಾದ ಮಾದಕ ವಸ್ತುವಿನ ಮೌಲ್ಯ ಸುಮಾರು 8 ಲಕ್ಷ ರೂ. ಎಂದು ಇಲಾಖೆ ತಿಳಿಸಿದೆ.

ಈ ಕಾರ್ಯಾಚರಣೆಯನ್ನು ಸಿ.ಪಿ.ಐ ರಂಗನಾಥ್ ನೀಲಮ್ಮನವರ್ ಮತ್ತು ಪಿ.ಎಸ್.ಐ ಯಲ್ಲಾಲಿಂಗ ಕುನ್ನೂರು ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ಕೈಗೆತ್ತಿಕೊಂಡಿತು. ಆರೋಪಿ ವಿರುದ್ದ ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಕೋಟೇಶ ನಾಗರೊಳ್ಳಿ, ಅಣ್ಣಪ್ಪ ಬುಡಿಗೇರ್, ಮಹಾಂತೇಶ ಮುಧೋಳ, ಶಿವಾನಂದ ದಾನಣ್ಣನವರ, ಅನ್ವರ್ ಬಮ್ಮಿಗಟ್ಟಿ ಹಾಗೂ ಗುರು ಬಿಶಟ್ಟಪ್ಪನವರ ಅವರು ಪಾಲ್ಗೊಂಡಿದ್ದರು.

ಪೊಲೀಸರ ಈ ದಾಳಿ ಪಟ್ಟಣದಲ್ಲಿ ನಡೆಯುತ್ತಿದ್ದ ಮಾದಕ ವಸ್ತುಗಳ ಅಕ್ರಮ ಜಾಲಕ್ಕೆ ಮತ್ತೊಂದು ದೊಡ್ಡ ಹೊಡೆತ ಎಂದೇ ಪರಿಗಣಿಸಲಾಗಿದೆ.

 

 

Please Share: