ಕರಾವಳಿ ವಾಯ್ಸ್ ನ್ಯೂಸ್
ಸಿದ್ದಾಪುರ: ತಾಲೂಕಿನ ಮುಖ್ಯರಸ್ತೆಯ ಚೌಡಿಆಣೆ ಕ್ರಾಸ್ ಬಳಿ ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಬೈಕ್ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತಪಟ್ಟ ಸವಾರನನ್ನು ಕೊಡಿಗದ್ದೆ ಮೂಲದ ವಿನಾಯಕ ಗೌಡ ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಸ್ಥಳೀಯರು ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದು, ಅವರ ಆರೋಗ್ಯ ಸ್ಥಿತಿ ಕುರಿತು ಇನ್ನೂ ಮಾಹಿತಿ ತಿಳಿದುಬರಬೇಕಿದೆ.
ಸುದ್ದಿ ತಿಳಿದು ತಕ್ಷಣ ಸಿದ್ದಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ಕಾರಣವಾದ ನಿಖರ ಕಾರಣ ತಿಳಿಯಬೇಕಿದೆ.

