ಕರಾವಳಿ ವಾಯ್ಸ್ ನ್ಯೂಸ್

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ–63ರ ವಜ್ರಳ್ಳಿ ಬಳಿ ಮಂಗಳವಾರ ಯಲ್ಲಾಪುರ–ಅಂಕೋಲಾ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

Banner Ad

ಪ್ರಾಥಮಿಕ ಮಾಹಿತಿಯ ಪ್ರಕಾರ, ಅತಿವೇಗವೇ ಅಪಘಾತಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಪಲ್ಟಿಯಾದ ರಭಸಕ್ಕೆ ಪ್ರಯಾಣಿಕರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣ ಅಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾರವಾರ–ರಾಯಚೂರು ಬಸ್ ಆಗಿರುವ ಈ ವಾಹನದಲ್ಲಿ ಮಹಿಳೆಯರು, ಮಕ್ಕಳೂ ಸೇರಿದಂತೆ ಹಲವರು ಪ್ರಯಾಣಿಸುತ್ತಿದ್ದರು. ಅಪಘಾತದ ತಕ್ಷಣ ಸ್ಥಳೀಯರು, ಯಲ್ಲಾಪುರ ಪೊಲೀಸರು ಹಾಗೂ ಗಾಯಾಳುಗಳ ರಕ್ಷಣಾ ತಂಡಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿದರು. ಅಪಘಾತದ ಕುರಿತು ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Please Share: