ಕರಾವಳಿ ವಾಯ್ಸ್ ನ್ಯೂಸ್
ಭಟ್ಕಳ: ತಾಲೂಕಿನ ತೆಂಗಿನಗುಂಡಿ ಕ್ರಾಸ್ ಬಳಿ ಅಕ್ರಮವಾಗಿ ಎತ್ತುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಹತ್ತು ಎತ್ತುಗಳು ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಾಗಿ ಭಟ್ಕಳದ ಆಜಾದ್ ನಗರದ ಅಪ್ಪಲ್ ಅಲಿ, ಹಾವೇರಿ ಜಿಲ್ಲೆಯ ಬ್ಯಾಡಗಿ ನಿವಾಸಿ ಶಂಭುಲಿಂಗಯ್ಯ ಹಿರೇಮಠ, ಗುತ್ತಲ್‌ನ ಸಂತೋಷ ಬೊರಾತ್ ಹಾಗೂ ದಿಡಗೂರಿನ ದೇವರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಒಟ್ಟು ₹5 ಲಕ್ಷ ಮೌಲ್ಯದ ಹತ್ತು ಎತ್ತುಗಳು ಹಾಗೂ ಸುಮಾರು ₹15 ಲಕ್ಷ ಮೌಲ್ಯದ ಲಾರಿಯನ್ನು ಭಟ್ಕಳ ಪೊಲೀಸರು ಜಪ್ತಿ ಮಾಡಿದ್ದಾರೆ. ಅಕ್ರಮ ಜಾನುವಾರು ಸಾಗಾಣಿಕೆ ಸಂಬಂಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

