ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಡಿಸೆಂಬರ್ 19 ರಂದು ಉತ್ತರ ಕನ್ನಡ ಜಿಲ್ಲೆಗೆ ಒಂದು ದಿನದ ಪ್ರವಾಸ ಕೈಗೊಳ್ಳಲಿದ್ದಾರೆ.
ಪ್ರವಾಸ ಕಾರ್ಯಕ್ರಮದಂತೆ, ಡಿ.19ರ ಬೆಳಿಗ್ಗೆ 7.30ಕ್ಕೆ ಬೆಳಗಾವಿಯಿಂದ ಹೆಲಿಕಾಪ್ಟರ್ ಮೂಲಕ ಅಂಕೋಲಾಕ್ಕೆ ಆಗಮಿಸಲಿರುವ ಅವರು, ಅಲ್ಲಿ ಇಳಿದು ರಸ್ತೆ ಮಾರ್ಗವಾಗಿ ಗೋಕರ್ಣಕ್ಕೆ ತೆರಳಲಿದ್ದಾರೆ. ಗೋಕರ್ಣದಲ್ಲಿ ಕಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಸಂಬಂಧಿಸಿದ ಗಣ್ಯರೊಂದಿಗೆ ಭೇಟಿಯಾಗಲಿದ್ದಾರೆ.
ಕಾರ್ಯಕ್ರಮ ಮುಗಿದ ಬಳಿಕ ಉಪ ಮುಖ್ಯಮಂತ್ರಿ ಅವರು ಮತ್ತೆ ಅಂಕೋಲಾಕ್ಕೆ ಆಗಮಿಸಿ, ಬೆಳಿಗ್ಗೆ 11 ಗಂಟೆಗೆ ಅಂಕೋಲಾದಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ನಿರ್ಗಮಿಸಲಿದ್ದಾರೆ.
ಉಪ ಮುಖ್ಯಮಂತ್ರಿ ಅವರ ಜಿಲ್ಲಾಪ್ರವಾಸ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಂಡಿದ್ದು, ಸಂಚಾರ ಹಾಗೂ ಸಾರ್ವಜನಿಕ ವ್ಯವಸ್ಥೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಉಪ ಮುಖ್ಯಮಂತ್ರಿ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದು, ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಿದ್ದರೆ ಮುಂಚಿತವಾಗಿ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

