ಕರಾವಳಿ ವಾಯ್ಸ್ ನ್ಯೂಸ್

ಯಲ್ಲಾಪುರ: ಪಟ್ಟಣದ ಹೊರವಲಯದ ಕಾರವಾರ ರಸ್ತೆಯ ಮಾಗೋಡು ತಿರುವಿನ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮೇಲೆ ಬಿಳಿ ಪಟ್ಟಿ (ವೈಟ್ ಮಾರ್ಕಿಂಗ್) ಎಳೆಯುವ ವೇಳೆ ಬಳಸುತ್ತಿದ್ದ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಶುಕ್ರವಾರ ನಡೆದಿದೆ.

ಯಲ್ಲಾಪುರ ಅಗ್ನಿಶಾಮಕ ದಳದ ತ್ವರಿತ ಕಾರ್ಯಾಚರಣೆಯಿಂದ ಭಾರಿ ಅನಾಹುತ ತಪ್ಪಿದೆ. ಹೆದ್ದಾರಿ ಬದಿಯಲ್ಲಿ ರಸ್ತೆ ಗುರುತು ಮಾಡುವ ಸಂದರ್ಭದಲ್ಲಿ ವಾಹನದಲ್ಲಿದ್ದ ಗ್ಯಾಸ್ ಪೈಪ್‌ಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಸಂಪೂರ್ಣ ವಾಹನಕ್ಕೆ ಆವರಿಸಿಕೊಂಡಿದೆ. ತಕ್ಷಣವೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿದ್ದು, ತಂಡ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಆದರೆ ವಾಹನದ ಸುಮಾರು ಶೇಕಡಾ 25 ಭಾಗ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.

ಅಗ್ನಿಶಾಮಕ ಠಾಣಾಧಿಕಾರಿ ಶಂಕರ ಅಂಗಡಿ ಅವರ ಮಾರ್ಗದರ್ಶನದಲ್ಲಿ, ಸಹಾಯಕ ಅಧಿಕಾರಿ ಸುಧೀರ್ ಕಿಂದಳ್ಕರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮಾರುತಿ ನಾಯ್ಕ್, ವಿಜಯ್, ಮೋಹನ್, ಪ್ರದೀಪ್, ವಾಸಿಂ ಹಾಗೂ ಅನಿತ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

 

Please Share: