ಕರಾವಳಿ ವಾಯ್ಸ್ ನ್ಯೂಸ್

ಮುಂಡಗೋಡ: ಮುಂಡಗೋಡ ಪೊಲೀಸ್ ಠಾಣೆಯ ಪಿಎಸ್ಐ ಯಲ್ಲಾಲಿಂಗ್ ಕುನ್ನೂರು (33) ಅನಾರೋಗ್ಯದಿಂದ ವಿಧಿವಶರಾಗಿರುವ ಘಟನೆ ಪೊಲೀಸ್ ವಲಯದಲ್ಲಿ ತೀವ್ರ ಶೋಕಕ್ಕೆ ಕಾರಣವಾಗಿದೆ.

Banner Ad

ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಯಲ್ಲಾಲಿಂಗ್ ಕುನ್ನೂರು ಅವರು ಮುಂಡಗೋಡಿಗೆ ಎರಡನೇ ಬಾರಿಗೆ ಪಿಎಸ್ಐ ಆಗಿ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿದ್ದು, ಜನಾನುರಾಗಿಯಾದ ಅಧಿಕಾರಿಯಾಗಿ ಉತ್ತಮ ಹೆಸರು ಗಳಿಸಿದ್ದರು. ಇದಕ್ಕೂ ಮೊದಲು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದು, ಕುಟುಂಬದ ಮೇಲೆ ದುಃಖದ ಛಾಯೆ ಆವರಿಸಿದೆ. ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಮುಖಂಡರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪಿಎಸ್ಐ ಯಲ್ಲಾಲಿಂಗ್ ಕುನ್ನೂರು ಅವರ ನಿಧನವು ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟವಾಗಿದೆ ಎಂದು ಶೋಕಸಂತಪ್ತರು ಅಭಿಪ್ರಾಯಪಟ್ಟಿದ್ದಾರೆ.

 

Please Share: