ಕಾರವಾರ :
ತಾಲೂಕಿನ ಮಾಜಾಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕೂಟಿ ಸವಾರರು ವಿದ್ಯುತ್ ಕಂಭಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

ಅತಿ ವೇಗದಿಂದ ಸ್ಕೂಟಿ ಚಲಾಯಿಸಿದ ಕಾರಣ ನಿಯಂತ್ರ ತಪ್ಪಿ ವಿದ್ತುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟಿ ನಜ್ಜುಗುಜ್ಜಾಗಿದ್ದು ಸವಾರ ಹಾಗೂ ಹಿಂಬದಿ ಸವಾರರ ತಲೆ ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಚಿತ್ತಾಕುಲ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಏಕ‌ಮುಖ‌ ಸಂಚಾರದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದಿರಬಹುದು ಎಂದು ಶಂಕಿಸಿದ್ದು, ತನಿಖೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಗೋವಾ ರಾಜ್ಯದ ದಾಬೋಲಿಯಂಗೆ ಸಾಗಿಸಲಾಗಿದೆ.

Please Share: