ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಕಾರು ಹಾಗೂ ಕಂಟೆನರ್ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಂಟೆನರ್ ಕಾರಿನ ಮೇಲೆ ಮುಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಬಿಣಗಾ–ಅರ್ಗಾ ಘಟ್ಟದ ಮಧ್ಯೆ ಸೋಮವಾರ ಮಧ್ಯಾಹ್ನ ನಡೆದಿದೆ.

Banner Ad

ಮಹಾರಾಷ್ಟ್ರ ನೋಂದಣಿ ಸಂಖ್ಯೆಯ MH15KG4891 ಕಾರು ಅಪಘಾತಕ್ಕೆ ಒಳಗಾಗಿದ್ದು, ಅಪಘಾತದ ವೇಳೆ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸುದ್ದಿ ತಿಳಿದು ಹೆದ್ದಾರಿಯಲ್ಲಿ ಸಾಕಷ್ಟು ಜನರು ಜಮಾಯಿಸಿ ಘಟನೆ ಸ್ಥಳಕ್ಕೆ ಧಾವಿಸಿದರು. ಕಾರಿನ ಮೇಲೆ ಕಂಟೆನರ್ ಮುಗುಚಿ ಬಿದ್ದ ದೃಶ್ಯ ಕಂಡು ಕೆಲಕಾಲ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ಮಾಹಿತಿ ತಿಳಿದ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಂಡರು. ಅಪಘಾತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಈ ಕುರಿತು ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದ್ದು, ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.

 

 

 

 

Please Share: