ಕರಾವಳಿ ವಾಯ್ಸ್ ನ್ಯೂಸ್ 

ಹೊನ್ನಾವರ: ತಾಲೂಕಿನ ಗೇರುಸೊಪ್ಪ ಹಾಡಗೇರಿ ಗ್ರಾಮದಲ್ಲಿ ಶನಿವಾರ ಸಂಜೆ ದುರ್ಘಟನೆ ಸಂಭವಿಸಿದ್ದು, ಏರ್ ಗನ್‌ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತ ಯುವಕನನ್ನು ಸುಬ್ರಹ್ಮಣ್ಯ ಮಂಜ ಮರಾಠಿ (18) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಸಮಯದಲ್ಲಿ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅವುಗಳನ್ನು ಓಡಿಸಲು ಸುಬ್ರಹ್ಮಣ್ಯ ಏರ್ ಗನ್ ತೆಗೆದುಕೊಂಡು ಹೊರಟಿದ್ದನು ಎನ್ನಲಾಗಿದೆ.

ಈ ವೇಳೆ ಅಕಸ್ಮಿಕವಾಗಿ ಅವನು ಜಾರಿ ಬಿದ್ದಿದ್ದು, ಕೈಯಲ್ಲಿದ್ದ ಏರ್ ಗನ್‌ನಿಂದ ಗುಂಡು ಸಿಡಿದು ಎದೆ ಭಾಗಕ್ಕೆ ತಗುಲಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾನೆ. ಗಾಯದ ತೀವ್ರತೆಯಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳೀಯರು ಅಲ್ಲಿಗೆ ಧಾವಿಸಿ ಪರಿಶೀಲನೆ ನಡೆಸಿದರೂ, ಆಗಲೇ ಯುವಕ ಮೃತಪಟ್ಟಿದ್ದನು ಎಂದು ತಿಳಿದು ಬಂದಿದೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಅಕಾಲಿಕ ಘಟನೆ ಗ್ರಾಮದಲ್ಲಿ ಶೋಕ ವಾತಾವರಣವನ್ನು ಮೂಡಿಸಿದೆ. ಯುವಕನ ಅಕಾಲಿಕ ಸಾವಿನಿಂದ ಕುಟುಂಬದವರು ಮತ್ತು ಗ್ರಾಮಸ್ಥರು ದುಃಖದಲ್ಲಿ ಮುಳುಗಿದ್ದಾರೆ.

ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Please Share: