ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಬುಧವಾರ ಬೆಳಿಗ್ಗೆ ಭೀಕರ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ತಗುಲಿ, ಕಾರಿನೊಳಗಿದ್ದ ಚಾಲಕ ಸುಟ್ಟು ಕರಕಲಾದ ದುರ್ಘಟನೆ ನಡೆದಿದೆ.

Banner Ad

ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ಬರುತ್ತಿದ್ದ Volkswagen ಕಂಪನಿಗೆ ಸೇರಿದ ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತೀವ್ರವಾಗಿದ್ದರಿಂದ ಕಾರಿನಲ್ಲಿದ್ದ ಚಾಲಕನಿಗೆ ಹೊರಬರಲು ಸಾಧ್ಯವಾಗದೆ, ದೇಹ ಸಂಪೂರ್ಣ ಸುಟ್ಟು ಗುರುತು ಸಿಗದಂತಾಗಿದೆ ಎಂದು ತಿಳಿದುಬಂದಿದೆ.

ಘಟನೆ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಡೆದಿದ್ದು, ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಬೆಂಕಿಯ ತೀವ್ರತೆಯಿಂದ ಕಾರು ಸಂಪೂರ್ಣ ಸುಟ್ಟು ಹಾನಿಗೊಳಗಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

 

Please Share: