ಕರಾವಳಿ ವಾಯ್ಸ್ ನ್ಯೂಸ್ 

ಅಂಕೋಲಾ: ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಭಗ್ನ ಪ್ರೇಮಿಯೊಬ್ಬ ಯುವತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ-ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್‌ನ ಮಹಿಳಾ ಪಿಜಿ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಯೋಗಿತಾ (23) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ಯುವತಿಯು ಪ್ರೀತಿ ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಭಗ್ನ ಪ್ರೇಮಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಹಲ್ಲೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

 

 

 

Please Share: