ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭಟ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅವರು ಹೊರಡಿಸಿದ ಆದೇಶದಂತೆ ಮೇ 28ರಂದು ಬೆಳಿಗ್ಗೆ 5 ಗಂಟೆಯಿಂದ ಮೇ 29ರ ಮಧ್ಯರಾತ್ರಿ 12 ಗಂಟೆಯವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ.
ಈ ಅವಧಿಯಲ್ಲಿ ಭಟ್ಕಳ ನಗರ ಠಾಣಾ ವ್ಯಾಪ್ತಿಯ ಎಲ್ಲಾ ಮದ್ಯದ ಅಂಗಡಿಗಳು ಬಂದ್ ಆಗಿರಲಿದ್ದು, ಯಾವುದೇ ರೀತಿಯ ಮದ್ಯ ಮಾರಾಟ, ಸಾಗಾಟ ಹಾಗೂ ವಿತರಣೆಗೂ ಅನುಮತಿ ಇರುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಹಬ್ಬದ ಸಮಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
