ಕರಾವಳಿ ವಾಯ್ಸ್ ನ್ಯೂಸ್ 

DANDELI: ನಗರದಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿತು. ನಗರದ ಹಲವು ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗಿತು.

Banner Ad

ಭಾರಿ ಗಾಳಿಯ ಅಬ್ಬರಕ್ಕೆ ಕೆಲ ಅಂಗಡಿಗಳ ಬೋರ್ಡ್‌ಗಳು ಹಾರಿ ಹೋಗಿ ಹಾನಿಯಾಗಿದೆ. ಮಳೆ ನೀರು ಅಂಗಡಿಗಳಿಗೆ ನುಗ್ಗಿದ ಪರಿಣಾಮ ವ್ಯಾಪಾರಿಗಳು ಸಂಕಷ್ಟ ಅನುಭವಿಸಿದರು. ಹಲವೆಡೆ ರಸ್ತೆಗಳ ಮೇಲೆ ಮರದ ಕೊಂಬೆಗಳು ಹಾಗೂ ಗಿಡಗಂಟೆಗಳು ಬಿದ್ದ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.

ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಆಸ್ಪತ್ರೆ ಮುಂಭಾಗಕ್ಕೂ ಮಳೆ ನೀರು ನುಗ್ಗಿ ಕೆಲಕಾಲ ಸಾರ್ವಜನಿಕರಿಗೆ ತೊಂದರೆ ಉಂಟಾಯಿತು.

ಆದರೆ, ಯಾವುದೇ ದೊಡ್ಡ ಮಟ್ಟದ ಹಾನಿ ಅಥವಾ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಮಳೆ ಕಡಿಮೆಯಾಗುತ್ತಿದ್ದಂತೆ ದಾಂಡೇಲಿಯ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳಿತು.

 

Please Share: