ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ತಾಲೂಕಿನ ಅಮದಳ್ಳಿ ಸಮೀಪದ ಜಡಿಗದ್ದೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ಬೈಕ್ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ.

Banner Ad

ವೇಗವಾಗಿ ಸಾಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ರಂಜನ್ ಹಾಗೂ ಕಾರ್ತಿಕ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯ ಇಲ್ಲ ಎಂದು ಮೂಲಗಳು ತಿಳಿಸಿವೆ.

ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

 

Please Share: