ಕರಾವಳಿ ವಾಯ್ಸ್ ನ್ಯೂಸ್
ಕಾರವಾರ, ಜೂ.7: ತಾಲೂಕಿನ ತೋಡೂರಿನಲ್ಲಿ ರಸ್ತೆ ಪಕ್ಕದಲ್ಲಿ ನಿಂತು ಫೋನಿನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಬಿಣಗಾ ಒಕ್ಕಲಕೇರಿಯ ಪ್ರದೀಪ ರಮೇಶ ಗೌಡ (55) ಗಾಯಗೊಂಡವರು. ಅವರು ತೋಡೂರಿಗೆ ತೆರಳಿದ್ದ ವೇಳೆ ರಸ್ತೆ ಬದಿಯಲ್ಲಿ ಬೈಕಿಗೆ ಆಧಾರವಾಗಿ ನಿಂತು ಫೋನಿನಲ್ಲಿ ಮಾತನಾಡುತ್ತಿದ್ದರು. ಇದೇ ವೇಳೆ ಅತಿ ವೇಗದಲ್ಲಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಪ್ರದೀಪ ಗೌಡ ರಸ್ತೆ ಮೇಲೆ ಬಿದ್ದಿದ್ದು, ಬೈಕ್ ಪಕ್ಕದ ಗದ್ದೆಗೆ ಎಸೆಯಲ್ಪಟ್ಟಿದೆ. ಪರಿಣಾಮ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವ ಉಂಟಾಗಿದೆ. ಸ್ಥಳೀಯರು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಗಾಯಾಳುವಿನ ಚಿಕಿತ್ಸೆಗೆ ಮುತುವರ್ಜಿ ವಹಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಗೋವಾಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಶಾಸಕ ಸತೀಶ್ ಸೈಲ್ ಅವರು ಕೂಡ ಆಸ್ಪತ್ರೆಯ ವೈದ್ಯರೊಂದಿಗೆ ಸಂಪರ್ಕಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಪ್ರದೀಪ ಗೌಡ ಅವರು Apollo Hospital Margao ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಡಿಯೋ ನೋಡಲು ಒಂದು ಕ್ಲಿಕ್ ಮಾಡಿ: ಉತ್ತರ ಕನ್ನಡ ಜಿಲ್ಲೆಯ ಅಪ್ಡೇಟ್ಸ್ ಗೆ ಚಾನೆಲ್ subscribe ಮಾಡಿ
