ಕರಾವಳಿ ವಾಯ್ಸ್ ನ್ಯೂಸ್ 

ಶಿರಸಿ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಕುತ್ತಿಗೆಯನ್ನು ಬ್ಲೇಡ್‌ನಿಂದ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮೇಲಿನ ಎಸಳೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮೇಲಿನ ಎಸಳೆಯ ಲಕ್ಷ್ಮೀನಾರಾಯಣ ಕೃಷ್ಣ ಹೆಗಡೆ (56) ಎಂದು ಗುರುತಿಸಲಾಗಿದೆ.

ಕುಟುಂಬದವರ ಮಾಹಿತಿ ಪ್ರಕಾರ, ಅವರು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಜೂನ್ 21ರಂದು ಬೆಳಿಗ್ಗೆ 7ರಿಂದ 7.40 ಗಂಟೆಯ ಅವಧಿಯಲ್ಲಿ ತಮ್ಮ ಮನೆಯ ಬಾತ್‌ರೂಮ್‌ನಲ್ಲಿ ಎರಡು ಶೇವಿಂಗ್ ಬ್ಲೇಡ್‌ಗಳನ್ನು ಬಳಸಿ ಕುತ್ತಿಗೆಯನ್ನು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮೃತರ ಸಹೋದರ ಕಮಲಾಕರ ಕೃಷ್ಣ ಹೆಗಡೆ ಅವರು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

 

Please Share: