ಕರಾವಳಿ ವಾಯ್ಸ್ ನ್ಯೂಸ್
ಶಿರಸಿ: ದಕ್ಷ, ಪ್ರಾಮಾಣಿಕ ಹಾಗೂ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಪಿಎಸ್ಐ ನಾಗಪ್ಪ.ಬಿ ಅವರಿಗೆ 2025-26ನೇ ಸಾಲಿನ ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕ ಲಭಿಸಿದೆ.
ಪೊಲೀಸ್ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಕಾರ್ಯಕ್ಷಮತೆ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿರುವ ನಾಗಪ್ಪ.ಬಿ ಅವರು ಈ ಹಿಂದೆ ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿ ಬಂಗಾರದ ಪದಕಕ್ಕೂ ಭಾಜನರಾಗಿದ್ದರು.
ಸೇವಾ ಅವಧಿಯಲ್ಲಿ ಹಲವು ಮಹತ್ವದ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಅವರು, ಅಪರಾಧ ನಿಯಂತ್ರಣ, ಸಾರ್ವಜನಿಕ ದೂರುಗಳ ತ್ವರಿತ ವಿಲೇವಾರಿ ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ಅವರ ಸೇವಾ ಸಾಧನೆ, ಕಾರ್ಯವೈಖರಿ ಹಾಗೂ ಇಲಾಖೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಪೊಲೀಸ್ ಇಲಾಖೆಯು ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕ ನೀಡಿ ಗೌರವಿಸಿದೆ.
ನಾಗಪ್ಪ.ಬಿ ಅವರಿಗೆ ಪ್ರತಿಷ್ಠಿತ ಶ್ಲಾಘನಾ ಪದಕ ಲಭಿಸಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.
PSI Nagappa B. Receives DGP and IGP Commendation Medal
Sirsi: PSI Nagappa B., known for his efficient, honest, and people-friendly policing, has been awarded the DGP and IGP Commendation Medal for 2025–26.
Nagappa, who had earlier received the Chief Minister’s Gold Medal for outstanding service, has earned recognition in the police department for his dedication to duty, effective maintenance of law and order, and strong rapport with the public.
During his service, he has successfully cracked several important cases and has made significant contributions towards crime control, prompt disposal of public grievances, and strengthening community-friendly policing.
In recognition of his exemplary service, professional achievements, and valuable contribution to the department, the State Police Department honoured him with the prestigious DGP and IGP Commendation Medal.
Police officers, staff members, and members of the public have congratulated Nagappa on receiving the honour.
