ಕರಾವಳಿ ವಾಯ್ಸ್ ನ್ಯೂಸ್
ರಾಮನಗರ: ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನಕ್ಕೆ ಸ್ವಿಫ್ಟ್ ಕಾರು ಭಾರೀ ಡಿಕ್ಕಿ ಹೊಡೆದ ಘಟನೆ ಸೋಮವಾರ ರಾಮನಗರ ಕಾಲೇಜು ಎದುರು ಸಂಭವಿಸಿದೆ.
ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪಿಕಪ್ ವಾಹನಕ್ಕೂ ಹಾನಿಯಾಗಿದೆ.
ಅಪಘಾತದ ಪರಿಣಾಮ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಎರಡೂ ಬದಿಗಳಲ್ಲಿ ವಾಹನಗಳ ಉದ್ದ ಸಾಲು ನಿರ್ಮಾಣವಾಗಿತ್ತು. ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ವಾಹನ ಅಪಘಾತದಲ್ಲಿ ಒಳಗೊಂಡಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಆದರೆ ಯಾವುದೇ ಸಿಲಿಂಡರ್ ಸೋರಿಕೆ ಅಥವಾ ಸ್ಫೋಟ ಸಂಭವಿಸದ ಕಾರಣ ಸಂಭವನೀಯ ಅನಾಹುತ ತಪ್ಪಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಸ್ಥಳೀಯರು ಹಾಗೂ ಸಾರ್ವಜನಿಕರು ವಾಹನಗಳ ತೆರವಿಗೆ ಸಹಕರಿಸಿದ್ದು, ಬಳಿಕ ಸಂಚಾರವನ್ನು ಸುಗಮಗೊಳಿಸಲಾಯಿತು.
