ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾರವಾರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಗುರುವಾರ (ಜು.2) ರಜೆ ಘೋಷಿಸಲಾಗಿದೆ.

ಗುರುವಾರ ಬೆಳಗ್ಗೆಯಿಂದಲೇ ಕಾರವಾರ ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಆದೇಶ ಹೊರಡಿಸಿ, ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿದ್ದಾರೆ.

ಇಂದು ನೀಡಲಾದ ರಜೆಯಿಂದ ಉಂಟಾಗುವ ಕಲಿಕಾ ದಿನದ ನಷ್ಟವನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ಶಾಲಾ ಕಾರ್ಯದಿನಗಳನ್ನು ನಡೆಸುವ ಮೂಲಕ ಸರಿದೂಗಿಸಿಕೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ ನೀಡಿದ್ದಾರೆ.

 

Please Share: