ಕರಾವಳಿ ವಾಯ್ಸ್ ನ್ಯೂಸ್
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಅಭಿನಂದನ್ ಅವರನ್ನು ಪೋಕೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಪ್ರಾಪ್ತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿ ಪಿಎಸ್ಐ ಅಭಿನಂದನ್ ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಪ್ರಕರಣದ ಕುರಿತು ಭಟ್ಕಳ ನಗರ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
