ಕರಾವಳಿ ವಾಯ್ಸ್ ನ್ಯೂಸ್ 

ಯಲ್ಲಾಪುರ: ತಾಲೂಕಿನ ರವೀಂದ್ರನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಣ ಪ್ರೇಮಿ ಹಾಗೂ ಸಮಾಜಸೇವಕ ಬಾಲಕೃಷ್ಣ ನಾಯಕ ಅವರ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

Banner Ad

ಈ ಸಂದರ್ಭದಲ್ಲಿ ಶಾಲೆಯ 44 ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಾಲಾ ಬ್ಯಾಗ್ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಿದ ಬಾಲಕೃಷ್ಣ ನಾಯಕ, ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ನೆರವು ನೀಡುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಳೆದ ಹಲವು ವರ್ಷಗಳಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ ಸೇರಿದಂತೆ ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಂಡು ಬರುತ್ತಿರುವ ಬಾಲಕೃಷ್ಣ ನಾಯಕ ಅವರ ಕಾರ್ಯವನ್ನು ಶಾಲೆಯ ಶಿಕ್ಷಕರು, ಪೋಷಕರು ಹಾಗೂ ಸ್ಥಳೀಯರು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಸದಸ್ಯ ಸೋಮೇಶ್ವರ ನಾಯ್ಕ, ಸಮರ್ಪಣಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ ನಾಯ್ಕ, ಸಂಜು ಜಾದವ್, ರವೀಂದ್ರನಗರದ ಹಿರಿಯರು, ಪೋಷಕರು, ಮುಖ್ಯ ಶಿಕ್ಷಕಿ ಜಯಶ್ರೀ ನಾಯಕ ಹಾಗೂ ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.

 

 

Please Share: