ಕರಾವಳಿ ವಾಯ್ಸ್ ನ್ಯೂಸ್ 

ಕುಮಟಾ: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಸೋಮವಾರ ತಾಲೂಕಿನ ಬರ್ಗಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Banner Ad

ಮೃತರನ್ನು ಕುಮಟಾದ ದುರ್ಗಿ ಹರಿಕಾಂತ ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಪಾದಚಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣ ಹಾಗೂ ಕಾರಿನ ಚಾಲಕನ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

ಮಹಿಳೆಯ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ದುಃಖ ಮಡುಗಟ್ಟಿದೆ. ಪ್ರತಿದಿನ ಸಂಚಾರ ದಟ್ಟಣೆಯಿಂದ ಕೂಡಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಚಾರಿಗಳ ಸುರಕ್ಷತೆ ಕುರಿತು ಮತ್ತೊಮ್ಮೆ ಪ್ರಶ್ನೆ ಮೂಡಿದೆ.

 

 

Please Share: