ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಸೇಫ್‌ಸ್ಟಾರ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕಾರವಾರ ಶಾಖೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಧ್ವಜಾರೋಹಣದ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

ಹೊನ್ನಾವರ ಪ್ರಧಾನ ಕಚೇರಿ ಹೊಂದಿರುವ ಸಂಸ್ಥೆ ರಾಜ್ಯಾದ್ಯಂತ 20 ಶಾಖೆಗಳನ್ನು ಹೊಂದಿದ್ದು, ಸಹಕಾರದ ಜತೆಗೆ ಸಾಮಾಜಿಕ ಸೇವೆಯಲ್ಲೂ ಮುಂಚೂಣಿಯಲ್ಲಿದೆ. ಸಂಸ್ಥೆಯ ಅಧ್ಯಕ್ಷ ಜಿ.ಜಿ. ಶಂಕರ ಅವರು 75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಸ್ಪಂದಿಸಿ ಜಿಲ್ಲೆಯ 2,000 ಮನೆಗಳಿಗೆ ರಾಷ್ಟ್ರಧ್ವಜ ಹಾಗೂ ಸಿಹಿತಿಂಡಿ ವಿತರಿಸಿದ್ದರು.

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ₹1.50 ಲಕ್ಷ ಹಾಗೂ ರಾಜ್ಯ ಸರ್ಕಾರಕ್ಕೆ ₹1 ಲಕ್ಷ ಧನಸಹಾಯ ನೀಡುವುದರ ಜತೆಗೆ, ಸುಮಾರು 20 ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ತಿಂಗಳ ವೇತನದ ನೆರವು ಮತ್ತು ಜಿಲ್ಲೆಯಾದ್ಯಂತ ಸಾವಿರಾರು ಜನರಿಗೆ ಉಪಹಾರ, ಊಟದ ವ್ಯವಸ್ಥೆ ಮಾಡಲಾಗಿತ್ತು.

‘ಸಹಕಾರಿಯಲ್ಲಿ ಲಾಭ ಮಾತ್ರವಲ್ಲ, ಸೇವೆಯೂ ಗುರಿ’ ಎಂಬ ಆಶಯದೊಂದಿಗೆ ಸಂಸ್ಥೆಯ ಎಲ್ಲ ಶಾಖೆಗಳಲ್ಲೂ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜೇಶ ದೇಸಾಯಿ, ಶಾಖಾ ವ್ಯವಸ್ಥಾಪಕ ರಾಘವೇಂದ್ರ ಮಹಾಲೆ, ರಿಕವರಿ ವ್ಯವಸ್ಥಾಪಕ ಉದಯ ನಾಯ್ಕ, ಸಹಾಯಕ ವ್ಯವಸ್ಥಾಪಕ ರಘುವೀರ ನಾಯ್ಕ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Advt

 

 

Please Share: