ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ತಾಲೂಕಿನ ಅಸ್ನೋಟಿ ಸಾವಂತವಾಡ ನಿವಾಸಿ ರೋಹನ ದಿನೇಶ ಗಡ್ಕರ ಆರೋಪಿ. ದೂರಿನ ಪ್ರಕಾರ ಆಗಸ್ಟ್ 24ರಂದು ಸಂಜೆ 6.30ರ ಸುಮಾರಿಗೆ ಸದಾಶಿವಗಡದ ಕೆಎಫ್‌ಸಿ ಕ್ರಾಸ್‌ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಫಾರೆನ್ಸಿಕ್ ಮೆಡಿಸಿನ್ ವಿಭಾಗದ ಹಿರಿಯ ವೈದ್ಯರು ನೀಡಿದ ವರದಿಯಲ್ಲಿ ಟೆಟ್ರಾಹೈಡ್ರೋಕ್ಯಾನಾಬಿನಾಲ್ (THC) ಪರೀಕ್ಷೆ ಪಾಸಿಟಿವ್ ಎಂದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರರಂದು ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಸರ್ಕಾರದ ಪರವಾಗಿ ದೂರು ದಾಖಲಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

 

Please Share: