ಕರಾವಳಿ ವಾಯ್ಸ್ ನ್ಯೂಸ್ 

ಸ್ವಚ್ಛತಾಗಾರರು/ಗಾರ್ಡ್ ಹುದ್ದೆಗೆ ಅರ್ಜಿ ಆಹ್ವಾನ

Banner Ad

ಕಾರವಾರ:- ಕಾರವಾರ ಒನ್ ಸ್ಟಾಪ್ ಸೆಂಟರ್ ಸಖಿ ಘಟಕದಲ್ಲಿ ಖಾಲಿ ಇರುವ ಸ್ವಚ್ಛತಾಗಾರರು/ಗಾರ್ಡ್ ಹುದ್ದೆಯ ಸೇವೆಯನ್ನು ನೇರ ಗುತ್ತಿಗೆ ಆಧಾರದ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಚ್ಛತಾಗಾರರು/ಗಾರ್ಡ್ ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ಸಹಾಯಕರಾಗಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಆಸಕ್ತಿಯುಳ್ಳ ಅರ್ಹ ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ವಿವರ, ಷರತ್ತು ಮತ್ತು ನಿರ್ಬಂಧನೆಗಳ ಬಗ್ಗೆ ನಿಗದಿತ ನಮೂನೆಯ ಅರ್ಜಿಯನ್ನು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಕಚೇರಿಯಿಂದ ಆ.29 ರಿಂದ ಸೆ.15 ರೊಳಗಾಗಿ (ಸರ್ಕಾರಿ ರಜೆ ದಿನಗಳು ಹೊರತುಪಡಿಸಿ) ಕಚೇರಿ ವೇಳೆಯಲ್ಲಿ ಪಡೆದು ಸಲ್ಲಿಸಬೇಕು. ಸೆ.15 ನಂತರ ಸ್ವೀಕೃತವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹೆಚ್ಚಿನ ಮಾಹಿತಿಗಾಗಿ ದೂ. 08382 226761 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬ್ಲಾಕ್ ಕೋ ಆರ್ಡಿನೇಟರ್ ಹುದ್ದೆಗೆ ಅರ್ಜಿ ಆಹ್ವಾನ.

ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೊಷಣ್ ಅಭಿಯಾನ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಮುಂಡಗೋಡ ಯೋಜನೆಯಲ್ಲಿ ಖಾಲಿಯಿರುವ ಬ್ಲಾಕ್ ಕೋ ಆರ್ಡಿನೇಟರ್ 1 ಹುದ್ದೆಯನ್ನು ನೇರ ಗುತ್ತಿಗೆ ಆಧಾರದ ಮೇಲೆ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಕಚೇರಿಯ ಅವಧಿಯಲ್ಲಿ ಉಪನಿರ್ದೇಶಕರ ಕಚೇರಿಯಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಸೆ.15 ರೊಳಗಾಗಿ ಸಲ್ಲಿಸಬೇಕು. ನಂತರ ಸ್ವೀಕೃತವಾದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ದಾಖಲೆ, ಷರತ್ತುಗಳು ಹಾಗು ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ದೂ. 08382 226761 ddwcdkarwar761@gmail.com ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Please Share: