ಕರಾವಳಿ ವಾಯ್ಸ್ ನ್ಯೂಸ್ 

ಶಿರಸಿ: ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ನಗರ ಪೂರ್ವ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿರಸಿಯ ಡಾನ್ ಬಾಸ್ಕೋ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಪ್ರಜಯ್ ಪ್ರೀತಮ್ ಬಾರ್ಕೂರ್ ಗಮನಾರ್ಹ ಸಾಧನೆ ಮಾಡಿದ್ದಾರೆ.

Banner Ad

400 ಮೀಟರ್ ಓಟದಲ್ಲಿ ಪ್ರಥಮ, ಟ್ರಿಪಲ್ ಜಂಪ್‌ನಲ್ಲಿ ಪ್ರಥಮ ಹಾಗೂ 400 ಮೀಟರ್ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ಉತ್ತಮ ಪ್ರದರ್ಶನ ನೀಡಿದ ಅವರು ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಗಳಿಸಿದ್ದಾರೆ.

ಪ್ರಜಯ್ ಪ್ರೀತಮ್ ಬಾರ್ಕೂರ್ ಅವರ ಸಾಧನೆಗೆ ಡಾನ್ ಬಾಸ್ಕೋ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ಅವರ ಸಾಧನೆ ಶಾಲೆಗೆ ಕೀರ್ತಿ ತಂದಿದೆ.

 

Please Share: