ಜೋಯಿಡಾ :  ಅನಾರೋಗ್ಯದಿಂದ ಬಳಲುತ್ತಿದ್ದ ಎರಡು ವರ್ಷದ ಹೆಣ್ಣಾನೆಯು ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಫಣಸೋಲಿ ಆನೆ ಶಿಬಿರದಲ್ಲಿ ಮೃತಪಟ್ಟಿದೆ.

 ಗೌರಿ ಎಂಬ ಎರಡು ವರ್ಷದ ಹೆಣ್ಣಾನೆ ಕೆಲ ದಿನಗಳಿಂದ ತೀವೃ ಅನಾರೋಗ್ಯದಿಂದ ಬಳಲುತ್ತಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿಯು  ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಗುರುವಾರ   ಮೃತಪಟ್ಟಿದೆ. ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಪದ್ದತಿಯಂತೆ ಆನೆಯ ಅಂತ್ಯಕ್ರಿಯೆ ನೆರವೇರಿಸಿದರು.

Banner Ad

 ದಾಂಡೇಲಿ ಎಸಿಎಪ್ಎಂಎಸ್ ಕಳ್ಳಿಮಠ, ಫಣಸೋಲಿ ವಲಯ ಅರಣ್ಯಾಧಿಕಾರಿ ರವಿಕಿರಣ್ ಸಂಪಗಾವಿ, ಗುಂದ ವಲಯ ಅರಣ್ಯಾಧಿಕಾರಿ ನೀಲಕಂಠ ದೇಸಾಯಿ,  ರಾಹುಲ್ ಬಾವುಜಿ, ವೈದ್ಯರು ಹಾಗೂ ಸಿಬ್ಬಂದಿ ಇದ್ದರು.

Please Share: