ಕರಾವಳಿ ವಾಯ್ಸ್ ನ್ಯೂಸ್
ಅಂಕೋಲಾ: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ‘ಸೇವಾ ಸಂಕಲ್ಪ ಅಭಿಯಾನ’ದಡಿ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಅಂಕೋಲಾದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಪಟ್ಟಣದ ಕೆ.ಸಿ.ರೋಡ್ನ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೀಪ ಬೆಳಗಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶವನ್ನು ಮುನ್ನಡೆಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.
ನಂತರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ತೆರಳಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರೋಗಿಗಳಿಗೆ ಬ್ರೆಡ್, ಹಾಲು ಹಾಗೂ ಹಣ್ಣುಹಂಪಲು ವಿತರಿಸಿದರು. ಬಳಿಕ ತೆಂಕಣಕೇರಿಯ ನಾಗರಾಜ ನಾರಾಯಣ ನಾಯ್ಕ ಅವರ ಮನೆಯಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ನಾಯ್ಕ, ಮಂಡಲ ಪ್ರಭಾರಿ ಅಧ್ಯಕ್ಷ ಸಂಜಯ ನಾಯ್ಕ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಜಗದೀಶ ನಾಯಕ ಮೊಗಟಾ, ಪ್ರಕೋಷ್ಠ ಜಿಲ್ಲಾ ಸಹ ಸಂಚಾಲಕ ರಾಘವೇಂದ್ರ ಭಟ್ಟ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಆರತಿ ಗೌಡ, ಮೀನುಗಾರ ಪ್ರಕೋಷ್ಠದ ನಿಕಟಪೂರ್ವ ರಾಜ್ಯ ಸಂಚಾಲಕ ಹೂವಾ ಖಂಡೇಕರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಕಾಂತ ನಾಯ್ಕ ಹಾಗೂ ಶ್ರೀಧರ ನಾಯ್ಕ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಪಾಲ್ಗೊಂಡಿದ್ದರು.
ಪುರಸಭೆ ನಿಕಟಪೂರ್ವ ಅಧ್ಯಕ್ಷ ಸೂರಜ ನಾಯ್ಕ, ನಿಕಟಪೂರ್ವ ಸದಸ್ಯ ವಿಶ್ವನಾಥ ನಾಯ್ಕ, ಜಯಾ ಬಾಲಕೃಷ್ಣ ನಾಯ್ಕ, ನಾಗರಾಜ ಐಗಳ, ಮಂಗೇಶ ಆಗೇರ, ಕೃಷ್ಣಕುಮಾರ ಮಹಾಲೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಮಂಜಾ ಟಾಕೇಕರ ಅವರ್ಸಾ, ಪ್ರವೀಣ ನಾಯ್ಕ ಶೇಟಗೇರಿ, ಮಂಕಾಳು ಗೌಡ ಬೆಳಸೆ, ನಾರಾಯಣ ಹೆಗಡೆ ಅಗಸೂರು, ರಾಜೇಶ ನಾಯಕ ಅಲಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


