ಕರಾವಳಿ ವಾಯ್ಸ್ ನ್ಯೂಸ್ 

ಗೋಕರ್ಣ: ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಸುಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರನ್ನು ಕೂಡ್ಲೆ ಬೀಚ್‌ನ ಜೀವ ರಕ್ಷಕ ಸಿಬ್ಬಂದಿ ಹಾಗೂ ವಾಟರ್‌ ಸ್ಪೋರ್ಟ್ಸ್ ಸಿಬ್ಬಂದಿ ಶನಿವಾರ ಬೆಳಗ್ಗೆ ರಕ್ಷಿಸಿದ್ದಾರೆ.

Banner Ad

ಬೆಂಗಳೂರಿನ ಹರಿಬಾಬು (30) ಹಾಗೂ ಶರವಾನ್ (30) ರಕ್ಷಣೆಗೆ ಒಳಗಾದ ಪ್ರವಾಸಿಗರು. ಮೂವರು ಸ್ನೇಹಿತರು ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಸುಳಿಗೆ ಸಿಲುಕಿದ್ದು, ದಡಕ್ಕೆ ಬರಲಾಗದೆ ಮುಳುಗುವ ಸ್ಥಿತಿಗೆ ತಲುಪಿದ್ದರು.

ತಕ್ಷಣ ಕಾರ್ಯಪ್ರವೃತ್ತರಾದ ಕರ್ತವ್ಯ ನಿರತ ಜೀವ ರಕ್ಷಕ ಸಿಬ್ಬಂದಿ ಮಂಜುನಾಥ ಹರಿಕಂತ್ರ ಹಾಗೂ ಜೆಸ್ಕಿ ಚಾಲಕ ಪ್ರಕಾಶ ಲಮಾಣಿ ಅವರು ಇಬ್ಬರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಇವರಿಗೆ ಜೀವ ರಕ್ಷಕ ಸಿಬ್ಬಂದಿ ನಾಗೇಂದ್ರ ಕೂರ್ಲೆ ಹಾಗೂ ಪ್ರವಾಸಿ ಮಿತ್ರ ಸತೀಶ್ ನಾಯಕ್ ಸಹಕಾರ ನೀಡಿದ್ದಾರೆ.

ಕೂಡ್ಲೆ ಬೀಚ್‌ನ ಮೈ ಸ್ಟಿಕ್ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿಯೂ ರಕ್ಷಣಾ ಕಾರ್ಯಕ್ಕೆ ನೆರವಾಗಿದ್ದು, ಸಮಯೋಚಿತ ಕಾರ್ಯಾಚರಣೆಯಿಂದ ಇಬ್ಬರು ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ.

 

 

 

Please Share: