ಕರಾವಳಿ ವಾಯ್ಸ್ ನ್ಯೂಸ್
ದಾಂಡೇಲಿ: ತಾಲೂಕಿನ ಕೊಣಪ ಗ್ರಾಮದ ಬೇಬಿ ಶೆಟ್ಟಿ ಅವರ ಹೊಲದಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು 15 ಅಡಿ ಉದ್ದದ ಬೃಹತ್ ಹೆಬ್ಬಾವು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತು.
ಹೊಲದಲ್ಲಿ ಹೆಬ್ಬಾವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಮಾಲೀಕರು ತಕ್ಷಣ ಉರಗ ತಜ್ಞ ರಜಾಕ್ ಶಾ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ರಜಾಕ್ ಶಾ ಅವರು ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಯಾವುದೇ ಅಪಾಯವಾಗದಂತೆ ಸುರಕ್ಷಿತವಾಗಿ ಸೆರೆಹಿಡಿದರು.
ಸ್ಥಳೀಯರ ಪ್ರಕಾರ, ಕಳೆದ ಕೆಲ ದಿನಗಳಿಂದ ಹೆಬ್ಬಾವು ಹೊಲದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿದ್ದು, ಅಲ್ಲಿನ ಪ್ರಾಣಿ-ಪಕ್ಷಿಗಳನ್ನು ಬೇಟೆಯಾಡುತ್ತಿತ್ತು. ಇದರಿಂದ ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬಳಿಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸುಮಾರು 15 ಅಡಿ ಉದ್ದದ ಹೆಬ್ಬಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.


