ಕರಾವಳಿ ವಾಯ್ಸ್ ನ್ಯೂಸ್ 

ಭಟ್ಕಳ: ಮಾರಾಟದ ಉದ್ದೇಶದಿಂದ ಎಂಡಿಎಂಎ ಮಾದಕ ವಸ್ತು ಇಟ್ಟುಕೊಂಡಿದ್ದ ಆರೋಪದ ಮೇಲೆ ಭಟ್ಕಳ ಶಹರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ ₹21,800 ಮೌಲ್ಯದ 2.180 ಗ್ರಾಂ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ್ದ ₹1 ಲಕ್ಷ ಮೌಲ್ಯದ ರಾಯಲ್ ಎನ್‌ಫೀಲ್ಡ್ ಬುಲೆಟ್‌ನ್ನು ವಶಪಡಿಸಿಕೊಂಡಿದ್ದಾರೆ.

Banner Ad

ಬಂಧಿತನನ್ನು ಭಟ್ಕಳ ಬಂದರ ರಸ್ತೆ 5ನೇ ಕ್ರಾಸ್ ನಿವಾಸಿ ಮಹ್ಮದ್ ರಿಜ್ವಾನ್ (34) ಎಂದು ಗುರುತಿಸಲಾಗಿದೆ. ಈತ ವಿದೇಶದಲ್ಲಿ ಸೇಲ್ಸ್‌ಮೆನ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಎಂಡಿಎಂಎ (MDMA–Methamphetamine) ಎಂದರೆ ನಿಷೇಧಿತ ಮಾದಕ ಪದಾರ್ಥವಾಗಿದ್ದು, ಮಾದಕ ಪರಿಣಾಮ ಉಂಟುಮಾಡುವ ಸಿಂಥೆಟಿಕ್ ಡ್ರಗ್ ಆಗಿದೆ. ಇದನ್ನು ಹೊಂದಿರುವುದು, ಮಾರಾಟ ಮಾಡುವುದು ಹಾಗೂ ಸಾಗಾಟ ಮಾಡುವುದು ಕಾನೂನುಬಾಹಿರವಾಗಿದೆ.

ಅಕ್ಟೋಬರ್ 8ರಂದು ಮಧ್ಯಾಹ್ನ 12.45ರ ಸುಮಾರಿಗೆ ಭಟ್ಕಳ ನಗರಸಭೆ ಸಮೀಪದ ಕಿದ್ವಾಯಿ ರಸ್ತೆಯಲ್ಲಿ ರಾಯಲ್ ಎನ್‌ಫೀಲ್ಡ್ ಬುಲೆಟ್ (KA-47/EB-8107)ನಲ್ಲಿ ಎಂಡಿಎಂಎ ಇಟ್ಟುಕೊಂಡಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ-1985ರ ಕಲಂ 8(c), 22(a) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ. ಕೃಷ್ಣಮೂರ್ತಿ ಹಾಗೂ ಭಟ್ಕಳ ಸಹಾಯಕ ಪೊಲೀಸ್ ಅಧೀಕ್ಷಕ ರಾನುಗುಪ್ತಾ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ದಿವಾಕರ ಪಿ.ಎಂ. ನೇತೃತ್ವದಲ್ಲಿ ಪಿಎಸ್‌ಐ ನವೀನ್ ಎಸ್. ನಾಯ್ಕ ಹಾಗೂ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

 

Please Share: