ಕರಾವಳಿ ವಾಯ್ಸ್ ನ್ಯೂಸ್ 

ದಾಂಡೇಲಿ: ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಾಡಿನಲ್ಲಿ ಪಲ್ಟಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡ ಘಟನೆ ತಾಲೂಕಿನ ಆಲೂರು ಬಳಿ ಶುಕ್ರವಾರ ಸಂಜೆ ನಡೆದಿದೆ.

Banner Ad

ಮೃತನನ್ನು ಮೌಲಾಲಿ (23) ಎಂದು ಗುರುತಿಸಲಾಗಿದೆ. ದಾಂಡೇಲಿ ಇಕೋ ಪಾರ್ಕ್ ವೀಕ್ಷಿಸಿ ಹುಬ್ಬಳ್ಳಿಗೆ ಮರಳುತ್ತಿದ್ದ ವೇಳೆ ಸಂಜೆ ಸುಮಾರು 7 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಾಡಿನಲ್ಲಿ ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರು ಚಾಲಕ ಮೌಲಾಲಿ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್‌ನಲ್ಲಿದ್ದ ಇಬ್ಬರು ಸವಾರರೂ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

Please Share: