ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಗೋವಾ ಮದ್ಯದ ಅಕ್ರಮ ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ ಅಬಕಾರಿ ಅಧಿಕಾರಿಗಳು, ಕಾರು ಸಹಿತ ಆರೋಪಿಯನ್ನು ಬಂಧಿಸಿದ್ದು, ಮತ್ತೊಂದು ದಾಳಿಯಲ್ಲಿ 179.640 ಲೀಟರ್ ಮದ್ಯ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

Banner Ad

ಶನಿವಾರ ಮಾಜಾಳಿ ಅಬಕಾರಿ ತನಿಖಾ ಠಾಣೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ಗೋವಾದಿಂದ ಕಾರವಾರದತ್ತ ಬರುತ್ತಿದ್ದ ಮಾರುತಿ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ 28.750 ಲೀಟರ್ ಗೋವಾ ಮದ್ಯ ಹಾಗೂ 2.320 ಲೀಟರ್ ಬಿಯರ್ ಪತ್ತೆಯಾಗಿದೆ. ಈ ಸಂಬಂಧ ಗೋವಾದ ಕಾಣಕೋಣ ತಾಲೂಕಿನ ಪೋಲೆಮ್, ಲೋಲೆಮ್ ನಿವಾಸಿ ದೀಪಕ ಪಾಗಿ ಎಂಬಾತನನ್ನು ಬಂಧಿಸಿ, ಕಾರು ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನೊಂದೆಡೆ, ಅಕ್ಟೋಬರ್ 6ರಂದು ಕಾರವಾರ ತಾಲೂಕಿನ ಮುಡಗೇರಿಯ ಅರಣ್ಯ ಪ್ರದೇಶದಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, 98,400 ರೂ. ಮೌಲ್ಯದ 179.640 ಲೀಟರ್ ಗೋವಾ ಮದ್ಯ ಹಾಗೂ 80 ಸಾವಿರ ರೂ. ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು ಹಾಗೂ ಉತ್ತರ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ, ಕಾರವಾರ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

 

 

 

 

 

 

 

Please Share: