ಕರಾವಳಿ ವಾಯ್ಸ್ ನ್ಯೂಸ್ 

Banner Ad

ಕಾರವಾರ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಿದರೆ ರಾಜ್ಯದಲ್ಲೂ ಬಸ್ ಪ್ರಯಾಣ ದರ ಇಳಿಕೆ ಮಾಡಲಾಗುವುದು ಎಂದು ಶಾಸಕ ಸತೀಶ್ ಸೈಲ್ ಹೇಳಿದರು.

ಕಾರವಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ದರ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿದೆ. ಕೇಂದ್ರ ದರ ಏರಿಕೆ ಮಾಡಿದಾಗ ರಾಜ್ಯ ಸರ್ಕಾರ ಬಸ್ ದರ ಏರಿಕೆ ಮಾಡದಿರಲು ಹೇಗೆ ಸಾಧ್ಯ? ಮುಖ್ಯಮಂತ್ರಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದರು.

ರೈತರ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡಲಾಗಿದ್ದು, ಹೆಚ್ಚಳದ ಹಣವನ್ನು ರೈತರಿಗೆ ನೀಡಲಾಗಿದೆ. ಮುಖ್ಯಮಂತ್ರಿ ಸರಿಯಾದ ನಿರ್ಧಾರ ಕೈಗೊಂಡಿದ್ದಾರೆ. ಅವರೊಂದಿಗೆ ನಾವೆಲ್ಲರೂ ಇದ್ದೇವೆ. ಕೇಂದ್ರ ಸರ್ಕಾರ ಇಂದೇ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ರಾಜ್ಯದಲ್ಲೂ ಬಸ್ ದರ ಇಳಿಕೆ ಮಾಡುತ್ತೇವೆ ಎಂದು ತಿಳಿಸಿದರು.

 

 

Please Share: