ಕರಾವಳಿ ವಾಯ್ಸ್ ನ್ಯೂಸ್ 

Banner Ad

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ 

ರಾಜ್ಯ ಸರ್ಕಾರ ನ.6ರಂದು ಹೊರಡಿಸಿರುವ ಅಧಿಸೂಚನೆಯಂತೆ, ಕೆ. ಲಕ್ಷ್ಮಿಪ್ರಿಯಾ ಅವರನ್ನು ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರಾಗಿ (ಎಫ್‌ಇಸಿಸಿ, ಚುನಾವಣೆ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಮತ್ತು ಸಮನ್ವಯ) ವರ್ಗಾಯಿಸಲಾಗಿದೆ. ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ-ಆಡಳಿತ ವಿಭಾಗದ ನಿರ್ದೇಶಕರಾಗಿದ್ದ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಇದೇ ವೇಳೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾಗಿದ್ದ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಈ ಎಲ್ಲ ವರ್ಗಾವಣೆಗಳು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶಿಸಿದೆ.

 

Please Share: