ಕರಾವಳಿ ವಾಯ್ಸ್ ನ್ಯೂಸ್ 

ಮುಂಡಗೋಡ: 12 ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡಿಸಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ನವೆಂಬರ್ 12ರ ಗುರುವಾರ ಮುಂಡಗೋಡ ಸಂಪೂರ್ಣ ಬಂದ್‌ಗೆ ಹಿಂದೂಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ.

Banner Ad

ಸಂತ್ರಸ್ತ ಬಾಲಕಿಗೆ ನ್ಯಾಯ ಒದಗಿಸಬೇಕು ಹಾಗೂ ಇಂತಹ ಅಮಾನುಷ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಮುಂಡಗೋಡದ ಐಬಿ ಆವರಣದಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಬಾಲಕಿಯರ ಸುರಕ್ಷತೆ ಖಾತ್ರಿಪಡಿಸುವ ನಿಟ್ಟಿನಲ್ಲಿ ನಾಗರಿಕರು ಹಾಗೂ ವರ್ತಕರು ಸ್ವಯಂಪ್ರೇರಿತವಾಗಿ ಬಂದ್‌ಗೆ ಸಹಕರಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

 

 

 

 

 

 

​

Please Share: