ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಪ್ರಕರಣದಲ್ಲಿ ಕಾರವಾರ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಜಮಾಡಿ ಚೆಕ್ಪೋಸ್ಟ್ ಬಳಿ ಪಡುಬಿದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 300 ಬಾಕ್ಸ್ ‘ಬ್ಲೂ ಓಷಿಯನ್ ವಿಸ್ಕಿ’ ಬ್ರ್ಯಾಂಡ್ನ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮದ್ಯ ಸಾಗಾಟಕ್ಕೆ ಬಳಸಲಾಗುತ್ತಿದ್ದ ಮಹೀಂದ್ರ ಪಿಕಪ್ ವಾಹನ ಹಾಗೂ ಮಾರುತಿ ಸ್ವಿಫ್ಟ್ ಡಿಸೈರ್ ಕಾರನ್ನೂ ಜಪ್ತಿ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಅಕ್ರಮ ಮದ್ಯ ಸಾಗಾಟದ ಹಿಂದಿರುವ ಜಾಲದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಗೋವಾದಿಂದ ಮದ್ಯವನ್ನು ತಂದು ಮಂಗಳೂರಿಗೆ ಸಾಗಿಸುತ್ತಿದ್ದ ಜಾಲದ ಇತರ ಸಂಪರ್ಕಗಳ ಬಗ್ಗೆಯೂ ತನಿಖೆ ಮುಂದುವರಿದಿದೆ.


