ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಕ್ರೀಡಾ ಸಾಧನೆಯ ಮೂಲಕ ಗಮನ ಸೆಳೆದ ನ್ಯೂ ಹೈಸ್ಕೂಲ್ ಬಾಡ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ ಬಾಬು ಗುನಗಿ ಅವರು ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂರು ಪದಕಗಳನ್ನು ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Banner Ad

ಧಾರವಾಡದ ಡಾ. ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನ.14 ಮತ್ತು 15ರಂದು ನಡೆದ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತದಲ್ಲಿ ಪ್ರಥಮ, ಹ್ಯಾಮರ್ ಎಸೆತದಲ್ಲಿ ದ್ವಿತೀಯ ಹಾಗೂ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಲೇ ಕ್ರೀಡೆಯಲ್ಲಿ ತೋರಿದ ಅವರ ಸಾಧನೆಗೆ ಪ್ರೀಮಿಯರ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ನಾಯ್ಕ್, ದೈಹಿಕ ಶಿಕ್ಷಣ ಪರೀಕ್ಷಕ ವಿಠೋಬ ನಾಯ್ಕ್, ಶಾಲೆಯ ಮುಖ್ಯಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ತಾಲೂಕು ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಊರ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.

 

 

 

Please Share: