ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಅಂತಿಮ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ನ.23ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅನ್ವಯ ಈ ಮೀಸಲಾತಿ ನಿಗದಿಪಡಿಸಲಾಗಿದೆ. ಅ.9ರಂದು ಪ್ರಕಟಿಸಿದ್ದ ಕರಡು ಅಧಿಸೂಚನೆಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.
ಜಿಲ್ಲೆಯ 53 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರವನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ. ಅದೇ ರೀತಿ ಜಿಲ್ಲೆಯ ವಿವಿಧ ತಾಲೂಕುಗಳ ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೂ ಸಾಮಾನ್ಯ, ಹಿಂದುಳಿದ ವರ್ಗಗಳ ‘ಅ’ ಮತ್ತು ‘ಬ’, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹಂಚಿಕೆ ಮಾಡಲಾಗಿದೆ.
ಅಂತಿಮ ಅಧಿಸೂಚನೆಯೊಂದಿಗೆ ಕ್ಷೇತ್ರಗಳ ಹೆಸರು ಹಾಗೂ ಅವುಗಳಿಗೆ ನಿಗದಿಪಡಿಸಿದ ಮೀಸಲಾತಿ ವರ್ಗಗಳ ಸಂಪೂರ್ಣ ವಿವರವನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.











