ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರ ತೋಡೂರು ಗ್ರಾಮ ಪಂಚಾಯಿತಿ ಕಚೇರಿಯ ಬಳಿ ಮಂಗಳವಾರ ಬೆಳಿಗ್ಗೆ ಕಾರು ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಸ್ಥಳೀಯ ಮೂಲಗಳ ಪ್ರಕಾರ, ಸ್ಕೂಟಿಯನ್ನು ತಿರುಗಿಸುತ್ತಿದ್ದ ವೇಳೆ ಅಂಕೋಲಾ ದಿಕ್ಕಿನಿಂದ ಕಾರವಾರದತ್ತ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಸ್ಕೂಟಿ ಹಾಗೂ ಕಾರಿನ ಮುಂಭಾಗ ಭಾಗಶಃ ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲವೆಂಬ ಮಾಹಿತಿ ದೊರೆತಿದ್ದು, ಸ್ಥಳಕ್ಕೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.


