ಕರಾವಳಿ ವಾಯ್ಸ್ ನ್ಯೂಸ್

ಮುಂಡಗೋಡ: ಹೊಲದ ಕೆಲಸ ಮಾಡುತ್ತಿದ್ದ ಕ್ಷಣದಲ್ಲಿ ಸಂಭವಿಸಿದ ಆಕಸ್ಮಿಕದಿಂದ ರೈತನೇ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಾಲೂಕಿನ ಹುನಗುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ತಿವೇರಿ ಗ್ರಾಮದಲ್ಲಿ ನಡೆದಿದೆ.

ತಹಸೀಲ್ದಾರ್ ಕಚೇರಿಯ ನೆಮ್ಮದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ತುಕಾರಾಮ ಪಾಟೀಲ (38) ಎಂಬವರು ತಮ್ಮ ಗದ್ದೆಯಲ್ಲಿ ಟ್ರ್ಯಾಕ್ಟರ್‌ನ ರೋಟರ್‌ ಹೊಡೆಸುತ್ತಿದ್ದ ವೇಳೆ ಬಲಗಾಲು ಯಂತ್ರದ ಬ್ಲೇಡ್‌ಗಳ ಮಧ್ಯೆ ಸಿಲುಕಿ ತೀವೃ ಗಾಯಗೊಂಡಿದ್ದಾರೆ. ಆಘಾತದಿಂದ ಕಾಲು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಘಟನೆ ಸ್ಥಳದಲ್ಲೇ ಆತಂಕದ ವಾತಾವರಣ ನಿರ್ಮಾಣವಾಯಿತು.

ತಕ್ಷಣ ಸ್ಥಳೀಯರು ಅವರನ್ನ ಮುಂಡಗೋಡ ತಾಲೂಕು ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಿದ್ದು, ನಂತರ ಗಂಭೀರ ಸ್ಥಿತಿಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ದುರ್ಘಟನೆ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಕೃಷಿ ಯಂತ್ರೋಪಕರಣ ಬಳಸುವಾಗ ಮುನ್ನೆಚ್ಚರಿಕೆ ವಹಿಸಲು ಪೊಲೀಸರು ರೈತರಿಗೆ ಮನವಿ ಮಾಡಿದ್ದಾರೆ.

 

Please Share: