ಕರಾವಳಿ ವಾಯ್ಸ್ ನ್ಯೂಸ್ 

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದ ಮನೆಯೊಂದರಲ್ಲಿ ಸಂಭವಿಸಿದ ನಾಡ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತಂದೆ ಹಾಗೂ ಮಗನ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಸಂತ @ ವಾಸು (52) ಹಾಗೂ ಆತನ ಪುತ್ರ ಮುನೇಶ್ವರ ವಿರುದ್ಧ Explosive Substances Act-1908 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳು ತಮ್ಮ ಮನೆಯಲ್ಲಿ ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳು ಮತ್ತು ನಾಡ ಬಾಂಬ್‌ಗಳನ್ನು ಸಂಗ್ರಹಿಸಿಟ್ಟಿದ್ದರೆಂದು ಆರೋಪಿಸಲಾಗಿದೆ. ಸೋಮವಾರ ಬೆಳಗಿನ ಜಾವ ಸುಮಾರು 5.10 ಗಂಟೆಗೆ ಏಕಾಏಕಿ ಸ್ಫೋಟ ಸಂಭವಿಸಿದ್ದು, ಅದರ ತೀವ್ರತೆಗೆ ಮನೆಯ ಮೇಲ್ಛಾವಣಿಯ ಹಂಚುಗಳು ಹಾಗೂ ಅಡುಗೆ ಮನೆಯ ಕಿಟಕಿಯ ಗಾಜುಗಳು ಪುಡಿಯಾಗಿವೆ. ಅಲ್ಲದೆ, ಸುತ್ತಮುತ್ತಲಿನ ಕೆಲವು ಮನೆಗಳಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಕಾಳಗಿನಕೊಪ್ಪ ಗ್ರಾಮದ ಮಾರುತಿ ಅಪ್ಪಯ್ಯ ಬಿಡದೋಳಕರ ಅವರು ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

 

 

 

Please Share: