ಕರಾವಳಿ ವಾಯ್ಸ್ ನ್ಯೂಸ್

ಕಾರವಾರ: 2004ರಲ್ಲಿ ಸಂಭವಿಸಿದ ರಸ್ತೆ ಅಪಘಾತ ಪ್ರಕರಣದಲ್ಲಿ ಬರೋಬ್ಬರಿ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರವಾರ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಬೆಂಗಳೂರಿನ ಸಿ.ವಿ. ರಾಮನ್ ನಗರ ಮೂಲದ ಎಸ್. ಖಾಸೀಮ್ ಎಂದು ಗುರುತಿಸಲಾಗಿದೆ. 2004ರಲ್ಲಿ ಬಿಣಗಾದ ಐಟಿಐ ಕಾಲೇಜು ಬಳಿ ಸೈಕಲ್ ಸವಾರನಿಗೆ ಲಾರಿಯಿಂದ ಡಿಕ್ಕಿ ಹೊಡೆದು ಅಪಘಾತಕ್ಕೆ ಕಾರಣನಾದ ಖಾಸೀಮ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಪಘಾತದಲ್ಲಿ ಸೈಕಲ್ ಸವಾರ ಮೃತಪಟ್ಟಿದ್ದನು.

ಕೆಲವು ದಿನಗಳು ನ್ಯಾಯಾಲಯಕ್ಕೆ ಹಾಜರಾದ ಆರೋಪಿಯು ಬಳಿಕ ತಲೆಮರೆಸಿಕೊಂಡಿದ್ದನು. ಪ್ರಕರಣ ಬಾಕಿ ಉಳಿದ ಹಿನ್ನೆಲೆಯಲ್ಲಿ ಸಂಚಾರ ಠಾಣೆಯ ಪಿಎಸ್ಐ ಶ್ರೀಕಾಂತ ರಾಠೋಡ ಹಾಗೂ ತಂಡ ಆರೋಪಿಯ ಪತ್ತೆಗೆ ಮುಂದಾಗಿದ್ದು, ಬಳ್ಳಾರಿಯಲ್ಲಿ ಖಾಸೀಮನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

 

Please Share: