ಅಂಕೋಲಾ: ತಾಲೂಕಿನ ಕಂಚಿನಬಾಗಿಲು ಬಳಿ ಲಾರಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡ ದಾರುಣ ಘಟನೆ ನಡೆದಿದೆ.
ಅಂಕೋಲಾದಿಂದ ಯಲ್ಲಾಪುರ ಕಡೆಗೆ ಸಾಗುತ್ತಿದ್ದ ಲಾರಿ ಹಾಗೂ ಎದುರಿನಿಂದ ಬಂದ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಬಸ್‌ನಲ್ಲಿದ್ದ ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಅಂಕೋಲಾ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಅಂಕೋಲಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.


