ಕರಾವಳಿ ವಾಯ್ಸ್ ನ್ಯೂಸ್
ಅಂಕೋಲಾ : ಸೋಮವಾರ ಮಧ್ಯಾಹ್ನ ಅವರ್ಸಾ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ಅವಘಡದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹುಬ್ಬಳ್ಳಿ ಮೂಲದ ಲಾರಿಯೊಂದು ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಹರಿದ ಪರಿಣಾಮ, ಅವರ ಎರಡೂ ಕಾಲುಗಳು ಜರ್ಜರಿತಗೊಂಡಿವೆ. ಗಾಯಗೊಂಡ ಮಹಿಳೆಯನ್ನು ಅವರ್ಸಾದ ಪ್ರೇಮಾ ಎಂದು ಗುರುತಿಸಲಾಗಿದೆ.
ಘಟನೆಯ ನಂತರ ಸ್ಥಳೀಯರು ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಥಳಕ್ಕಾಗಮಿಸಿದ ಅಂಕೋಲಾ ಪೊಲೀಸರು ಪರಿಶೀಲನೆ ನಡೆಸಿ, ಅಪಘಾತಕ್ಕೀಡಾದ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ದಿನ, ಬಾಂಡಿಶಿಟ್ಟದಲ್ಲೂ ಸಾರಿಗೆ ಬಸ್ ಮತ್ತು ಸ್ಕೂಟಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ವೃದ್ಧೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಎರಡೂ ಘಟನೆಗಳು ಹೆದ್ದಾರಿಯಲ್ಲಿ ವೇಗ ನಿಯಂತ್ರಣ ಮತ್ತು ಪಾದಚಾರಿಗಳ ಸುರಕ್ಷತೆ ಕುರಿತು ಮತ್ತೆ ಚಿಂತನೆಗೆ ಗ್ರಾಸವಾಗಿದೆ.


